HomeKarnatakaBIG NEWS: ಶಾಲಾ ಸಮಯ ಬದಲಾವಣೆ ಬಗ್ಗೆ ಚಿಂತನೆ

BIG NEWS: ಶಾಲಾ ಸಮಯ ಬದಲಾವಣೆ ಬಗ್ಗೆ ಚಿಂತನೆ

ಬೆಂಗಳೂರು: ಸಂಚಾರದಟ್ಟಣೆ ಸಮಸ್ಯೆ ನಿವಾರಣೆಗೆ ಶಾಲಾ ಸಮಯ ಬದಲಾವಣೆ ಬಗ್ಗೆ ಚರ್ಚೆ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಮುಖಂಡರ ಸಭೆ ಕರೆದು ತೀರ್ಮಾನಿಸಲು ಮುಂದಾಗಿದೆ.

ರಾಜ್ಯಾದ್ಯಂತ ಬಹುತೇಕ ಶಾಲೆಗಳಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಲೆಗಳು ಆರಂಭವಾಗುತ್ತವೆ. ಶಾಲಾ ಸಮಯವನ್ನು ಅರ್ಧ ಗಂಟೆ ಬೇಗನೆ ಮಾಡಬೇಕೆಂಬ ಚಿಂತನೆ ನಡೆದಿದೆ. ಆದರೆ, ಇದರಿಂದ ಅನಾನುಕೂಲವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳು ಬೇಗ ಬೆಳಿಗ್ಗೆ ಬೇಗನೇ ಏಳಬೇಕು, ದೈಹಿಕ ಚಟುವಟಿಕೆಗೆ ಕಡಿಮೆ ಅವಕಾಶ ಸಿಗುತ್ತದೆ. ಕಡಿಮೆ ನಿದ್ದೆಯಿಂದ ಆರೋಗ್ಯ ಸಮಸ್ಯೆ ಎದುರಾಗಬಹುದು. ಸಂಜೆ ಸಮಯಕ್ಕೆ ಶಾಲೆ ಬಿಡುವುದು ವಿಳಂಬವಾಗುತ್ತದೆ. ಶಾಲಾ ಸಮಯಕ್ಕೆ ಉದ್ಯೋಗಿಗಳು ಕಂಪನಿಗಳಿಂದ ಹೊರಬರುವುದರಿಂದ ಸಂಚಾರ ದಟ್ಟಣೆ ಆಗಬಹುದು. ಶಾಲಾ ಸಮಯ ಬದಲಾಯಿಸಿದರೆ ಅನಾನುಕೂಲವಾಗುತ್ತದೆ ಎನ್ನುವ ಕಾರಣಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಶಾಲೆ ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಹೈಕೋರ್ಟ್ ಸರ್ಕಾರಕ್ಕೆ ಸಲಹೆ ನೀಡಿದೆ. ಸಂಚಾರದಟ್ಟಣೆಗೆ ಪ್ರಮುಖವಾಗಿ ಕಾರಣವಾಗಿರುವ ಶಾಲೆ, ಕೈಗಾರಿಕೆ, ವಾಣಿಜ್ಯ ಸಂಸ್ಥೆ, ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಇತರರ ಸಭೆ ಕರೆದು ಚರ್ಚೆ ನಡೆಸಲು ಕೋರ್ಟ್ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಬೆಂಗಳೂರಿನಲ್ಲಿ ಮಾತ್ರ ಸಮಯ ಬದಲಾವಣೆ ಮಾಡಬೇಕೆ ಅಥವಾ ರಾಜ್ಯಾದ್ಯಂತ ಶಾಲೆಗಳ ಸಮಯ ಬದಲಾವಣೆ ಮಾಡಬೇಕೆಂಬುದರ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular