ಬೆಂಗಳೂರು : ಗಣೇಶನ ಹಬ್ಬದ ಸಂಭ್ರಮಕ್ಕೆ ವರುಣರಾಯ ಅಡ್ಡಿ ಯಾಗುವ ಸಾಧ್ಯತೆಯಿದ್ದು, ಇನ್ನೊಂದು ವಾರ ಭಾರಿ ‘ಮಳೆ’ ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 23ರವರೆಗೂ ಮಳೆ ಮುಂದುವರೆಯಲಿದೆ , ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಇನ್ನೊಂದು ವಾರ ಭಾರಿ ಮಳೆಯಾಗಲಿದೆ. ಮುಂದಿನ 24 ಗಂಟೆಯಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣ ಇದ್ದು, ಇಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.