ಬೆಂಗಳೂರು : ಗೌರಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಿ ( BBMP) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 18-09-2023ರ ಸೋಮವಾರ “ಗಣೇಶ ಚತುರ್ಥಿ ಹಬ್ಬದ” ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವದ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.