HomeKarnatakaಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಬದಲಾವಣೆ: ಪೌಷ್ಟಿಕಾಂಶ ಹೆಚ್ಚಳ, ಗುಣಮಟ್ಟದ ಆಹಾರ ನೀಡಿಕೆ

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಬದಲಾವಣೆ: ಪೌಷ್ಟಿಕಾಂಶ ಹೆಚ್ಚಳ, ಗುಣಮಟ್ಟದ ಆಹಾರ ನೀಡಿಕೆ

ಬೆಂಗಳೂರು: ಶಾಲೆಗಳಲ್ಲಿ ನೀಡಲಾಗುತ್ತಿರುವ ಬಿಸಿಯೂಟದಲ್ಲಿ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಪೌಷ್ಟಿಕಾಂಶ ಇರುವ ಗುಣಮಟ್ಟದ ಆಹಾರ ನೀಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.

ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಎರಡೂ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಹಾರ ಇಲಾಖೆ ಸಾರ್ವಜನಿಕ ವಿತರಣಾ ಪದ್ಧತಿ ಮೂಲಕ ಅಕ್ಕಿ ಪೂರೈಸುತ್ತಿದ್ದು, ಗುಣಮಟ್ಟ ಹೆಚ್ಚಳ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ.

ಅಧಿಕಾರಿಗಳು ಗುಣಮಟ್ಟ ಹೆಚ್ಚಳಕ್ಕೆ ಅಕ್ಕಿಗೆ ನಿಗದಿ ಮಾಡಿದ ದರಕಿಂತ ಹೆಚ್ಚಿನ ದರ ನೀಡಬೇಕಿದೆ ಎಂದು ತಿಳಿಸಿದ್ದಾರೆ. ಶಿಕ್ಷಣ ಇಲಾಖೆ ಸಾರ್ವಜನಿಕ ವಿತರಣಾ ಪದ್ಧತಿ ಮೂಲಕ ಪ್ರತಿ ಕೆಜಿಗೆ 30ರೂ. ನೀಡುತ್ತಿದೆ. ಗುಣಮಟ್ಟದ ಅಕ್ಕಿ ಪೂರೈಕೆಗೆ 34 ರೂಪಾಯಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ಇರುವ ಹಣದಲ್ಲಿಯೇ ಗುಣಮಟ್ಟದ ಅಕ್ಕಿ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ. ಗುಣಮಟ್ಟದ ಆಹಾರ ಸಾಮಗ್ರಿ ಪೂರೈಕೆ ಮಾಡುವಂತೆ ಆಹಾರ ಇಲಾಖೆಗೆ ಮನವಿ ಮಾಡಲಾಗಿದ್ದು, ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ಶಾಲೆಗಳಲ್ಲಿ ಮಕ್ಕಳ ಬಿಸಿಯೂಟದಲ್ಲಿ ಪೌಷ್ಟಿಕಾಂಶ ಹೆಚ್ಚಳ ಜೊತೆಗೆ ಗುಣಮಟ್ಟ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular