HomeKarnatakaಶವ ಸಂಸ್ಕಾರಕ್ಕೆ ಬಂದವರಿಗೆ ಬಿಗ್ ಶಾಕ್: ಹೆಜ್ಜೇನು ದಾಳಿಯಿಂದ ಒಬ್ಬರು ಸಾವು, 14 ಜನ ಆಸ್ಪತ್ರೆಗೆ...

ಶವ ಸಂಸ್ಕಾರಕ್ಕೆ ಬಂದವರಿಗೆ ಬಿಗ್ ಶಾಕ್: ಹೆಜ್ಜೇನು ದಾಳಿಯಿಂದ ಒಬ್ಬರು ಸಾವು, 14 ಜನ ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಶವಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟು, 10ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹನೂರು ಸಮೀಪ ಕೊಂಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 60 ವರ್ಷದ ಚೆನ್ನಪ್ಪ ಮೃತಪಟ್ಟವರು ಎಂದು ಹೇಳಲಾಗಿದೆ. ಕೊಂಗನಹಳ್ಳಿ ಗ್ರಾಮದ ಮೂಡಲಬೀದಿಯ ಮಹಿಳೆಯೊಬ್ಬರು ಮೃತಪಟ್ಟಿದ್ದು, ಭಾನುವಾರ ಮಧ್ಯಾಹ್ನ ಕುಟುಂಬದವರು, ಸಂಬಂಧಿಕರು, ಗ್ರಾಮಸ್ಥರು ಅಂತ್ಯಸಂಸ್ಕಾರಕ್ಕೆ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತದೇಹಕ್ಕೆ ಪೂಜೆ ಸಲ್ಲಿಸಿ ಬೆಂಕಿ ಹಚ್ಚುತ್ತಿದ್ದಂತೆ ಮರದ ಮೇಲಿದ್ದ ಹೆಜ್ಜೇನು 15 ಜನರ ಮೇಲೆ ದಾಳಿ ಮಾಡಿವೆ. ಹೆಜ್ಜೆನು ದಾಳಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಚೆನ್ನಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. 14 ಮಂದಿ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರು ತೀವ್ರ ಅಸ್ವಸ್ಥರಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular