ತುಮಕೂರು : ಹಬ್ಬದ ದಿನವೇ ಘೋರ ಘಟನೆ ನಡೆದಿದ್ದು, ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.
ಮೃತ ಬಾಲಕನನ್ನು ಋತ್ವಿಕ್ (10) ಎಂದು ಗುರುತಿಸಲಾಗಿದೆ. ಮನೆ ಸಮೀಪ ಆಟವಾಡುತ್ತಿದ್ದ ವೇಳೆ ಮನೆ ಸಮೀಪದಲ್ಲಿದ್ದ ವಿದ್ಯುತ್ ತಂತಿ ತಗುಲಿ ಶಾಕ್ ಹೊಡೆದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.