ಬೆಂಗಳೂರು : ಇನ್ನೂ3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಮೂರು ಜನರನ್ನು ಉಪಮುಖ್ಯಮಂತ್ರಿ ಮಾಡುವ ವಿಚಾರವಾಗಿ ಮುಖ್ಯಮಂತ್ರಿಗಳೇ ಉತ್ತರ ಕೊಡುತ್ತಾರೆ ಎಂದರು.
ನಾವು ಮುಖ್ಯಮಂತ್ರಿಗಳ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಅವರೇ ಇದಕ್ಕೆ ಉತ್ತರ ಕೊಡಬೇಕು. ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಅವರನ್ನೇ ಕೇಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ 3 ಡಿಸಿಎಂ ಹುದ್ದೆಗಳನ್ನು ಸೃಷ್ಟಿ ಮಾಡಲು ಸಲಹೆ ನೀಡಿದ್ದೇನೆ . ಇನ್ನೂ3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.