BREAKING : ‘ಪ್ರಜ್ವಲ್ ರೇವಣ್ಣ’ ಗೆ ತಾತ್ಕಾಲಿಕ ರಿಲೀಫ್ : ಹೈಕೋರ್ಟ್ ಅಮಾನತು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ನವದೆಹಲಿ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಹೊರಡಿಸಿದ್ದ ಹೈಕೋರ್ಟ್ ಆದೇಶದ ಕುರಿತು ಸುಪ್ರೀಂಕೋರ್ಟ್ ನ ಸಿಜೆಐ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಪ್ರಜ್ವಲ್ ರೇವಣ್ಣ ಅನರ್ಹ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಲೋಕಸಭೆಗೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕದ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠವು, ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಪ್ರಜ್ವಲ್ ರೇವಣ್ಣ ಆಯ್ಕೆ ಪ್ರಶ್ನಿಸಿ ಎ.ಮಂಜು, ದೇವರಾಜೇಗೌಡ ಅವರು ಚುನವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು. ಸಂಸದ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read