alex Certify BIG NEWS : ರಾಜ್ಯದಲ್ಲಿ ‘ಹುಕ್ಕಾಬಾರ್’ ನಿಷೇಧಿಸಲು ಸರ್ಕಾರ ನಿರ್ಧಾರ : ಸಚಿವ ದಿನೇಶ್ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ‘ಹುಕ್ಕಾಬಾರ್’ ನಿಷೇಧಿಸಲು ಸರ್ಕಾರ ನಿರ್ಧಾರ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ‘ಹುಕ್ಕಾಬಾರ್’ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಮಾಡುವ ಸಂಬಂಧ ಆರೋಗ್ಯ ಇಲಾಖೆ ಮತ್ತು ಯುವಜನ ಸಬಲೀಕರಣ, ಸಹಯೋಗದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಭಾಗವಹಿಸಿ ನಂತರ ಮಾತನಾಡಿದರು.
ರಾಜ್ಯದಲ್ಲಿ ‘ಹುಕ್ಕಾಬಾರ್’ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ. ಹುಕ್ಕಾಬಾರ್ ಗೆ ಮಕ್ಕಳು ಹೆಚ್ಚಾಗಿ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಅನಿವಾರ್ಯವಾಗಿದೆ, ಇದಕ್ಕಾಗಿ ವಿಧೇಯಕವನ್ನು ಮಂಡಿಸುವುದಾಗಿಯೂ ಅವರು ಹೇಳಿದರು.

ತಂಬಾಕು ಉತ್ಪನ್ನಗಳನ್ನು ಈಗ 18 ವರ್ಷ ಮೇಲ್ಪಟ್ಟವರು ಖರೀದಿ ಮಾಡಲು ಅವಕಾಶ ಇದೆ. ಅದನ್ನು 21 ವರ್ಷಕ್ಕೆ ಏರಿಕೆ ಮಾಡಲು ಚಿಂತನೆ ನಡೆಸಿದ್ದೇವೆ ಎಂದರು.ಮಸೀದಿ, ದೇವಸ್ಥಾನ, ಚರ್ಚ್, ಆಸ್ಪತ್ರೆ ಸುತ್ತಮುತ್ತಾ ತಂಬಾಕು ವಸ್ತು ಮಾರಾಟಕ್ಕೆ ನಿಷೇಧಕ್ಕೆ ತೀರ್ಮಾನಿಸಿದ್ದೇವೆ  ಎಂದರು.

ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೇಳಿದ್ದೇನು..?

ಈ ವಿಚಾರದ ಕುರಿತು ಮಾತನಾಡಿದ ಅವರು ನನಗೆ ಗೊತ್ತಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಆ ಸಂದರ್ಭದ ಬಂದಾಗ ಸಿಎಂ, ಮತ್ತು ಕೇಂದ್ರ ನಾಯಕರು ಮಾಡುತ್ತಾರೆ. ಇದನ್ನು ಸಾರ್ವಜನಿಕ ವಲಯದಲ್ಲಿ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...