ಶಿವಮೊಗ್ಗ : ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ.27 ರಂದು ಆಯೋಜಿಸಲಾಗಿದೆ.
ಸೆ.27 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸೇಂಟ್ ಜೋಸೆಫ್ ಶಾಲೆ, ಮಂಕಾಳಲೆ, ಸಾಗರ, ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಹೋಟೆಲ್ ಪೂಜಾ ಇಂಟರ್ನ್ಯಾಷನಲ್, 1ನೇ ಮಹಡಿ, ದೇವರಾಜ ಅರಸ್ ಬಡಾವಣೆ, ಹಳೆ ಪಿಬಿ ರಸ್ತೆ ದಾವಣಗೆರೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಕಮಿಷನರ್ ತಿಳಿಸಿದ್ದಾರೆ