HomeKarnatakaಗಣೇಶ ಹಬ್ಬ ಹಿನ್ನೆಲೆ : ಈ ಜಿಲ್ಲೆಯಲ್ಲಿ 3 ದಿನ ಮದ್ಯಮಾರಾಟ ನಿಷೇಧ

ಗಣೇಶ ಹಬ್ಬ ಹಿನ್ನೆಲೆ : ಈ ಜಿಲ್ಲೆಯಲ್ಲಿ 3 ದಿನ ಮದ್ಯಮಾರಾಟ ನಿಷೇಧ

ಕೊಪ್ಪಳ : ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಶಾಂತಿ ಪಾಲನೆಗಾಗಿ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 20, 21 ಮತ್ತು 23ರಂದು ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಾಂತ ಆಚರಿಸಲಾಗುವ ಗೌರಿ-ಗಣೇಶ ಹಬ್ಬದ ಅಂಗವಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಾರೆ ಹಾಗೂ ಗೌರಿ ಗಣೇಶ ಮೂರ್ತಿಗಳನ್ನು 1, 2, 3, 5, 7, 9, 11ನೇ ದಿನಗಳಂದು ಮೂರ್ತಿಗಳನ್ನು ಮೆರವಣಿಗೆಯಲ್ಲಿ ಸಾಗಿ ವಿಸರ್ಜನೆ ಮಾಡುವರು.  ಹಬ್ಬದ ಆಚರಣೆ ಸಮಯದಲ್ಲಿ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕೆಲವು ದುಷ್ಟ ಶಕ್ತಿಗಳು ಕೋಮು ಸಾಮರಸ್ಯಕ್ಕೆ ಧಕ್ಕೆಯನ್ನುಂಟು ಮಾಡುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಹಬ್ಬದ ಆಚರಣೆ ಸಮಯದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗೆ ಸೆ. 20, 21 ಮತ್ತು 23ರಂದು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ಆಧೀಕ್ಷಕರು, ಕೊಪ್ಪಳ ಅವರು  ಕೋರಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದರಂತೆ ಗೌರಿ-ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಶಕ್ತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರ ಚಲಾಯಿಸಿ, 3ನೇ ದಿನದ ಗಣೇಶ ವಿಸರ್ಜನೆಯ ಪ್ರಯುಕ್ತ ಜಿಲ್ಲೆಯ ಯಲಬುರ್ಗಾ, ಬೇವೂರು ಹಾಗೂ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 20ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ಮದ್ಯೆ ಮಾರಾಟವನ್ನು ನಿಷೇಧಿಸಿದೆ. ಅದೇ ರೀತಿ 3ನೇ ಮತ್ತು 5ನೇ ದಿನದ ಗಣೇಶ ವಿಸರ್ಜನೆಯ ಪ್ರಯುಕ್ತ ಕೊಪ್ಪಳ ನಗರ, ಮುನಿರಾಬಾದ್, ಕೊಪ್ಪಳ ಗ್ರಾಮೀಣ, ಅಳವಂಡಿ, ಗಂಗಾವತಿ ನಗರ, ಗಂಗಾವತಿ ಗ್ರಾಮೀಣ, ಕನಕಗಿರಿ, ಕುಷ್ಟಗಿ, ತಾವರಗೇರಾ, ಹನಮಸಾಗರ ಮತ್ತು ಕಾರಟಗಿ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 21ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ಮತ್ತು ಸೆ. 23ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ಮದ್ಯೆ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular