
ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು CWMA ಆದೇಶ ಹೊರಡಿಸಿದ್ದು, ಈ ಬಗ್ಗೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾವೇರಿ ನದಿ ನೀರು ಕುರಿತು ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

