ಬೆಂಗಳೂರು : ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ನೀರು ವಿಚಾರವಾಗಿ ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ರೈತರ ಹಿತಕಾಪಾಡುವಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ. ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜಕೀಯ ಮರೆತು ಒಗ್ಗಟ್ಟಾಗಿದ್ದೇವೆ. ಸಂಜೆ 4 ಗಂಟೆಗೆ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿದ್ದೇವೆ ಎಂದರು.