ಬೆಂಗಳೂರು : ತಮಿಳುನಾಡಿಗೆ ನೀರು ಬಿಡಲು ಆಗಲ್ಲ ಎಂದು ಪ್ರಧಾನಿ ಮೋದಿ ಹೇಳ್ಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿ ಕಾವೇರಿ ನದಿ ನೀರು ವಿವಾದದ ಸಂಬಂಧ ನಡೆದ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾವೇರಿ ನದಿ ನೀರು ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸ್ಬೇಕು, ಎರಡು ರಾಜ್ಯದ ನಾಯಕರನ್ನು ಕರೆಸಿಕೊಂಡು ಪ್ರಧಾನಿ ಮೋದಿ ಮಾತನಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅಲ್ಲದೇ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಕಾವೇರಿ ನದಿ ನೀರು ವಿಚಾರದಲ್ಲಿ ಸಂಕಷ್ಟ ಸೂತ್ರ ಅಗತ್ಯ. ಸಂಕಷ್ಟದ ಸೂತ್ರ ಏನು ಎನ್ದುನುವು ತಯಾರಿಯಾಗಿಲ್ಲ. ಇದು ದುರದುಷ್ಟಕರ ಎಂದರು. ನಮಗೆ ಕುಡಿಯುವ ನೀರು, ಬೆಳೆ ರಕ್ಷಣೆ, ಕೈಗಾರಿಕೆಗೂ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ. CWMA, CWRA ಮುಂದೆ ಸಮರ್ಥವಾಗಿ ನಮ್ಮ ವಾಸ್ತವ ಪರಿಸ್ಥಿತಿಯನ್ನು ಮಂಡಿಸಿದ್ದೇವೆ ಎಂದರು.
ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿದ್ದೇನೆ ಎಂದರು.