HomeKarnatakaಕಾವೇರಿ ನೀರಿಗಾಗಿ ಧ್ವನಿ ಎತ್ತದ ಸಾಂಡಲ್ ವುಡ್ ನಟರು; ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಧರಣಿ...

ಕಾವೇರಿ ನೀರಿಗಾಗಿ ಧ್ವನಿ ಎತ್ತದ ಸಾಂಡಲ್ ವುಡ್ ನಟರು; ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಧರಣಿ ಕುಳಿತ ಕನ್ನಡಪರ ಸಂಘಟನೆ

ಬೆಂಗಳೂರು: ಕಾವೇರಿ ನೀರಿಗಾಗಿ ಚಕಾರವೆತ್ತದ ಕನ್ನಡ ಚಿತ್ರರಂಗದ ನಟರ ವಿರುದ್ಧ ರೈತರು, ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಮಂಡ್ಯ ಜಿಲ್ಲೆಯಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಕನ್ನಡ ಚಿತ್ರರಂಗದ ನಟರು ಕಾವೇರಿ ನೀರಿಗಾಗಿ ಧ್ವನಿ ಎತ್ತುತ್ತಿಲ್ಲ ಎಂದು ಮಂಡ್ಯ ಭಾಗದ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದರು. ಸ್ಯಾಂಡಲ್ ವುಡ್ ನಟರ ವಿರುದ್ಧ ಧಿಕ್ಕಾರ ಎಂದು ಪೋಸ್ಟರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಕನ್ನಡಪರ ಸಂಘಟನೆ ಹಾಗೂ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಯಾಂಡಲ್ ವುಡ್ ನಟರ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದಾಗ್ಯೂ ಚಿತ್ರರಂಗದ ನಟರು ಕಾವೇರಿ ನೀರಿಗಾಗಿ ಧ್ವನಿ ಎತ್ತುತ್ತಿಲ್ಲ. ನಮ್ಮ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ನೋಡಿಕೊಂಡು ಸುಮ್ಮನೆ ಕುಳಿತಿರುವ ನಟರ ಧೋರಣೆ ವಿರುದ್ಧ ಧಿಕ್ಕಾರವಿರಲಿ ಎಂದು ಘೋಷಣೆಗಳನ್ನು ಕೂಗಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular