ಕೋಲಾರ: ವಿದ್ಯಾರ್ಥಿನಿಯೊಬ್ಬಳನ್ನು ಕೈ ಮುರಿಯುವಂತೆ ಸರ್ಕಾರಿ ಶಾಲೆ ಶಿಕ್ಷಕಿ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಅಲ್ಲಿಕಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣೇಶ ಮೂರ್ತಿಗೆ ಪೂಜೆ ಮಾಡಿದ ವಿಚಾರಕ್ಕೆ ಮುಖ್ಯ ಶಿಕ್ಷಕಿ ಹೇಮಲತಾ ವಿದ್ಯಾರ್ಥಿನಿ ಭವ್ಯಶ್ರೀ ಎಂಬುವವಳನ್ನು ಹೊಡೆದಿದ್ದಾರೆ. ಶಿಕ್ಷಕಿಯ ಥಳಿತಕ್ಕೆ ವಿದ್ಯಾರ್ಥಿನಿಯ ಎಡಗೈ ಮುರಿದಿದ್ದು, ಪೋಷಕರು ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು.
ಗ್ರಾಮಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಕಳೆದ ವಾರ ಈ ಘಟನೆ ನಡೆದಿತ್ತು. ಶಾಲಾ ಮುಖ್ಯ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಡಿಡಿಪಿಐ ಅವರಿಗೆ ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮುಖ್ಯ ಶಿಕ್ಷಕಿ ಹೇಮಲಾತಾ ಅವರನ್ನು ಸಸ್ಪೆಂಡ್ ಮಾಡಿ ಡಿಡಿಪಿಐ ಕೃಷ್ಣ ಮೂರ್ತಿ ಆದೇಶ ಹೊರಡಿಸಿದ್ದಾರೆ.