
ಸೆಪ್ಟಂಬರ್ 23ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 2 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಈ ಸಮಯದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ, ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮನವಿ ಮಾಡಿದೆ.

