HomeIndiaಕ್ಲಾಸ್ ರೂಮ್ ನಲ್ಲೇ ಕುಸಿದು ಬಿದ್ದ ವಿದ್ಯಾರ್ಥಿ; ಹೃದಯಾಘಾತದಿಂದ ಸಾವು

ಕ್ಲಾಸ್ ರೂಮ್ ನಲ್ಲೇ ಕುಸಿದು ಬಿದ್ದ ವಿದ್ಯಾರ್ಥಿ; ಹೃದಯಾಘಾತದಿಂದ ಸಾವು

ಲಖನೌ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಯೊಬ್ಬ ತರಗತಿಯಲ್ಲಿಯೇ ಕುಸಿದು ಬಿದ್ದು ಹೃದಯಾಗಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌ ನಲ್ಲಿ ನಡೆದಿದೆ.

9ನೇ ತರಗತಿ ವಿದ್ಯಾರ್ಥಿ 14 ವರ್ಷದ ಅತೀಫ್ ಸಿದ್ದಿಕಿ ಮೃತ ಬಾಲಕ. ಅಲಿಗಂಜ್ ವಿಭಾಗದ ಮಾಂಟೆಸ್ಸೊರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸಾಯನ ಶಾಸ್ತ್ರ ಬೋಧನೆ ನಡೆಯುತ್ತಿದ್ದಾಗ ವಿದ್ಯಾರ್ಥಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ತಕ್ಷಣ ವಿದ್ಯಾರ್ಥಿಯನ್ನು ಶಿಕ್ಷಕರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ವಿದ್ಯಾರ್ಥಿಗೆ ಹೃದಯಾಘಾತವಾಗಿರಬಹುದು ಎಂದು ವೈದ್ಯರು ಹೇಳಿದ್ದರು. ಕೂಡಲೇ ಲರಿ ಕಾರ್ಡಿಯಾಲಜಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

ವೈದ್ಯರು ವಿದ್ಯಾರ್ಥಿ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎನ್ನಲಾಗಿದೆ. ಆದರೆ ಮರಣೋತ್ತರ ಪರೀಕ್ಷೆ ಬಳಿಕವೇ ಸ್ಪಷ್ಟವಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular