ಬೆಂಗಳೂರು : ತಮಿಳುನಾಡಿಗೆ ಮೊದಲು ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ‘ತಮಿಳುನಾಡಿಗೆ ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ. ಕೋರ್ಟ್ ಮುಂದೆ ವಾದ ಮಂಡಿಸುವುದರಲ್ಲಿ ಸರ್ಕಾರ ವಿಫಲವಾಗಿದೆ. ಸರಿಯಾಗಿ ವರ್ಕ್ ಮಾಡಬೇಕಿತ್ತು’ ಎಂದಿದ್ದಾರೆ.
ಮಿತ್ರ ಪಕ್ಷ ಡಿಎಂಕೆ ಜೊತೆ ಕಾಂಗ್ರೆಸ್ ಸರ್ಕಾರ ಮಾತನಾಡಬೇಕು. ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ. ಕೇಂದ್ರ ಮಧ್ಯ ಪ್ರವೇಶ ಮಾಡುವಂತೆ ಒತ್ತಾಯ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.