ಕೋಲಾರ : ಟಿಪ್ಪರ್ ಲಾರಿ ಹರಿದು ಆಟೋ ಚಾಲಕ ದಾರುಣವಾಗಿ ಮೃತಪಟ್ಟ ಘಟನೆ ಕೋಲಾರ ತಾಲೂಕಿನ ಮಡೇರಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಸೂಲೂರು ಗ್ರಾಮದ ಧನುಷ್ (29) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟಿಪ್ಪರ್ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದ ಚಾಲಕನ ಮೇಲೆ ಟಿಪ್ಪರ್ ಚಕ್ರ ಹರಿದಿದೆ. ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ್ದು,, ದೇಹ ಛಿದ್ರ ಛಿದ್ರವಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಎಸ್ಕೇಪ್ ಆಗಿದ್ದು, ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.