ಬೆಂಗಳೂರು : ಹಲಸೂರು ಕೆರೆಯಲ್ಲಿ ದಿನಾಂಕ:22/09/2023 ರ ಇಂದು ಟ್ಯಾನರಿ ರಸ್ತೆ ಮತ್ತು ವಿವಿಧ ಏರಿಯಾಗಳ ಸಾರ್ವಜನಿಕ ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಪ್ರಯುಕ್ತ ಈ ಕೆಳಕಂಡಂತೆ ಕೆಲವೊಂದು ಸಂಚಾರ ಮಾರ್ಗ ಬದಲಾವಣೆ ಮಾಡಿ ಪರ್ಯಾಯ ಮಾರ್ಗ ಸೂಚಿಸಲಾಗಿದೆ.
ಕೆ.ಜಿ.ಹಳ್ಳಿ ಮತ್ತು ಮಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿಗಳ ಮೆರವಣಿಗೆ ಮತ್ತು ಹಲಸೂರು ಕೆರೆಯಲ್ಲಿ ವಿಸರ್ಜನಾ ಕಾರ್ಯಕ್ರಮ ಇರುವುದರಿಂದ ಸುಗಮ ಸಂಚಾರದ ಹಿತದೃಷ್ಟಿಯಿಂದ ಬೆಳಗ್ಗೆ 10-00 ಗಂಟೆಯಿಂದ ರಾತ್ರಿ 10:00 ಗಂಟೆವರೆಗೆ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.
ಸಂಚಾರವನ್ನು ನಿರ್ಬಂಧಿಸಿರುವ ರಸ್ತೆಗಳು:
- ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ನೇತಾಜಿ ಜಂಕ್ಷನ್ ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
- ಕೆನ್ಸಿಂಗ್‌ಟನ್ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕಾವ ನಿರ್ಬಂಧಿಸಲಾಗಿರುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್ಟನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿರುತ್ತದೆ. ದಿನಾಂಕ 22,09,2023 ಮತ್ತು ದಿನಾಂಕ 24,09,2023 ರಂದು ರಾತ್ರಿ 8.00 ಗಂಟೆಯಿಂದ ಬೆಳಿಗ್ಗೆ 6.00 ಗಂಟೆಯವರೆಗೆ).
ನಿರ್ಬಂಧಿಸಿದ ಸಂಚಾರಕ್ಕೆ ಪರ್ಯಾಯ ಮಾರ್ಗಗಳು
- ಥಣಿಸಂದ್ರ ಕಡೆಯಿಂದ ಶಿವಾಜಿನಗರ ಕಡೆಗೆ ಬರುವ ವಾಹನಗಳು ನಾಗವಾರ ಪಂಕ್ಷನ್‌ನಿಂದ -ಎಡತಿರುವು ಹೆಣ್ಣೂರು ಜಂಕ್ಷನ್ – ಬಲತಿರುವು – ಸಿದ್ದಪ್ಪ ರೆಡ್ಡಿ ಜಂಕ್ಷನ್ – ಆಯೋಧ್ಯ ಜಂಕ್ಷನ್ -ಲಿಂಗರಾಜಪುರಂ ಫೈ ಓವರ್ ಮೂಲಕ ರಾಬರ್ಟ್‌ಸನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು – ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪುವುದು, –
2, ಶಿವಾಜಿನಗರದ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದು – ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಬಹುದಾಗಿದೆ.
- ಆರ್.ಟಿ.ನಗರ ದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚರಿಸಬಹುದಾಗಿರುತ್ತದೆ.
- ಹೇನ್ಸ್ – ನೇತಾಜಿ ರಸ್ತೆ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗವಾರ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ – ನೇತಾಜಿ ಜಂಕ್ಷನ್‌ನಿಂದ – ಬಲತಿರುವು – ಮಾಸ್ಕ್ ಜಂಕ್ಷನ್ – ಲಾಜರ್ ರಸ್ತೆ ಎಂ.ಎಂ.ರಸ್ತೆ ಜಂಕ್ಷನ್ – ಎಡತಿರುವು – ಪಾಟರಿ ಸರ್ಕಲ್ – ಹೆಣ್ಣೂರು ರಸ್ತೆ ಜಂಕ್ಷನ್ – ಬಲತಿರುವು – ಹೆಚ್.ಎಂ.ರಸ್ತೆ ಡೇವಿಸ್ ರಸ್ತೆ ಜಂಕ್ಷನ್ ಮೂಲಕ ಲಿಂಗರಾಜಪುರಂ ಫೈಓವರ್ ಮುಖೇನ ಹೆಣ್ಣೂರು ಕಡೆಗೆ ಸಂಚರಿಸಬಹುದಾಗಿದೆ.
- ಕೆನ್ನಿಂಗ್‌ಟನ್ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ – ಕೆನ್ಸಿಂಗ್‌ಟನ್ ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು ತಿರುವಳ್ಳವರ್ ಪ್ರತಿಮೆ – ಬಲತಿರುವು – ಆರ್.ಬಿ.ಐ ಕ್ವಾಟ್ರಸ್ ಜಂಕ್ಷನ್ ತಿರುವು – ಲಾವಣ್ಯ ಥಿಯೇಟರ್ ಜಂಕ್ಷನ್ – ನಾಗಾ ಜಂಕ್ಷನ್ – ಬಲತಿರುವು ಪಡೆದು ಹಲಸೂರು ಕೆರೆ ಕಡೆಗೆ ಹೋಗ ಬಹುದಾಗಿರುತ್ತದೆ. –
ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು
ಪಾಟರಿ ಸರ್ಕಲ್ ನಿಂದ ನಾಗವಾರ ಸಿಗ್ನಲ್, ಗೋವಿಂದಪುರ ಜಂಕ್ಷನ್‌ನಿಂದ ಗೋವಿಂದಪುರ ಕಾ & ಸು ಪೊಲೀಸ್ ಠಾಣೆಯವರೆಗೆ ಮತ್ತು ಹೆಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‌ನಿಂದ ನರೇಂದ್ರ ಟೆಂಟ್ ಜಂಕ್ಷನ್ ವರೆಗೆ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿರುತ್ತದೆ.
- ಪಾಟರಿ ಸರ್ಕಲ್ ಎಂ.ಎಂ.ರಸ್ತೆಯಿಂದ ಲಾಜರ್ ರಸ್ತೆವರೆಗೆ ಹಾಗೂ ಸಿಂಧಿ ಕಾಲೋನಿ ಜಂಕ್ಷನ್‌ನಿಂದ ವಾರ್ ಮೆಮೊರಿಯಲ್ ಜಂಕ್ಷನ್ ವರೆಗೆ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿರುತ್ತದೆ.
- ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ರಸ್ತೆಗಳಲ್ಲಿ ಪಾರ್ಕಿಂಗ್ ಅನ್ನು ದಿನಾಂಕ 22.09.2023 ಮತ್ತು ದಿನಾಂಕ 24.09.2023 ರಂದು ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿರುತ್ತದೆ.