ನವದೆಹಲಿ: ಲೋಕಸಭೆ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನಾ ವಿಧೇಯಕ್ಕೆ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ನೀಡಲಾಗಿದೆ.
ಸುಧೀರ್ಘ ಚರ್ಚೆ ನಡೆದ ನಂತರ ಮತದಾನದಲ್ಲಿ ಹಾಜರಿದ್ದ 215 ಸದಸ್ಯರು ವಿಧೇಯಕದ ಪರವಾಗಿ ಮತ ಚಲಾಯಿಸಿದ್ದಾರೆ. ಬುಧವಾರ ಲೋಕಸಭೆಯಲ್ಲಿ 452-2 ಮತಗಳಿಂದ ವಿಧಯಕ ಅಂಗೀಕಾರಗೊಂಡಿತ್ತು. ಲೋಕಸಭೆಯಲ್ಲಿ ಅನುಮೋದನೆಗೊಂಡಿದ್ದ ವಿಧೇಯಕಕ್ಕೆ ರಾಜ್ಯಸಭೆಯಲ್ಲಿಯೂ ಅನುಮೋದನೆ ದೊರೆತಿದೆ.
ರಾಜ್ಯಸಭೆಯಲ್ಲಿ 215- 0 ಮತಗಳಿಂದ ವಿಧೇಯಕ ಅಂಗೀಕಾರಗೊಂಡಿದ್ದು, ಚಾರಿತ್ರಿಕ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸಂಸತ್ ಅನುಮೋದನೆ ದೊರೆತಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ವಿಧೇಯಕವನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳಿಸಿಕೊಡಲಾಗುವುದು.