HomeKarnatakaBIG NEWS: ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ಕಿಚ್ಚು; ಟಿ.ಕೆ.ಹಳ್ಳಿ ಪಂಪ್ ಹೌಸ್ ಗೆ ಮುತ್ತಿಗೆ ಹಾಕಲು...

BIG NEWS: ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ಕಿಚ್ಚು; ಟಿ.ಕೆ.ಹಳ್ಳಿ ಪಂಪ್ ಹೌಸ್ ಗೆ ಮುತ್ತಿಗೆ ಹಾಕಲು ಕನ್ನಡಪರ ಸಂಘಟನೆ ಸಿದ್ಧತೆ

ಮಂಡ್ಯ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈತರು, ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ.

ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿವೆ. ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ಮುಂದುವರೆದಿದ್ದು, ಇಂದು ಕನ್ನಡಪರ ಸಂಘಟನೆಗಳು ಸರಣಿ ಪ್ರತಿಭಟನೆಗೆ ಕರೆ ಕೊಟ್ಟಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಡೀ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಟಿ.ಕೆ.ಹಳ್ಳಿ ಪಂಪ್ ಹೌಸ್ ಗೆ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲು ಸಿದ್ಧತೆ ನಡೆಸಿವೆ. ಬೆಂಗಳೂರಿಗೆ ನೀರು ನಿಲ್ಲಿಸಿ ರೈತರ ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಲಿದ್ದಾರೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕನ್ನಡಪರ ಸಂಘಟನೆಗಳು ಮುಂದಾಗಿವೆ.

For Latest News Updates, Join Our Whatsapp Community🚩
RELATED ARTICLES

Most Popular