HomeKarnatakaಪ್ರಯಾಣಿಕರಿಗೆ ಗುಡ್ ನ್ಯೂಸ್: ಕೆ.ಆರ್.ಪುರ-ಬೈಯಪ್ಪನಹಳ್ಳಿ ಮೆಟ್ರೋ ಸುರಕ್ಷತೆ ಯಶಸ್ವಿ; ಕೆಂಗೇರಿ-ವೈಟ್ ಫೀಲ್ಡ್ ವರೆಗೆ ತಡೆರಹಿತ ಸಂಚಾರ...

ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೆ.ಆರ್.ಪುರ-ಬೈಯಪ್ಪನಹಳ್ಳಿ ಮೆಟ್ರೋ ಸುರಕ್ಷತೆ ಯಶಸ್ವಿ; ಕೆಂಗೇರಿ-ವೈಟ್ ಫೀಲ್ಡ್ ವರೆಗೆ ತಡೆರಹಿತ ಸಂಚಾರ ಶೀಘ್ರ ಆರಂಭ

ಬೆಂಗಳೂರು: ಕೆ.ಆರ್.ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ಹೊಸದಾಗಿ ನಿರ್ಮಿಸಲಾಗಿರುವ ನಮ್ಮ ಮೆಟ್ರೋ ಮಾರ್ಗದಲ್ಲಿ ನಡೆಸಿದ ಸುರಕ್ಷತಾ ಪರೀಕ್ಷೆ ಯಶಸ್ವಿಯಾಗಿದೆ.

ಬಿ.ಎಂ.ಆರ್.ಸಿ.ಎಲ್ ಮೆಟ್ರೋ ಸುರಕ್ಷತಾ ಆಯುಕ್ತರ ನೇತೃತ್ವದ ತಂಡ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆ.ಆರ್.ಪುರ ಮೆಟ್ರೋ ನಿಲ್ದಾಣದವರೆಗೆ ಪ್ರಯಾಣಿಸಿ, ಸುರಕ್ಷತೆ ಪರಿಶೀಲನೆ ನಡೆಸಿದ್ದು, ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಸುರಕ್ಷಿತವಾಗಿದೆ ಎಂದು ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಆರ್.ಪುರ ಹಾಗೂ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಆಯುಕ್ತರ ತಂಡ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಂಗೇರಿ ಮೆಟ್ರೋ ನಿಲ್ದಾಣದಿಂದ ವೈಟ್ ಫೀಲ್ಡ್ ನಿಲ್ದಾಣದವರೆಗೆ ತಡೆರಹಿತ ಸಂಚಾರ ಕೂಡ ಶೀಘ್ರವೇ ಆರ‍ಂಭವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular