ಮಡಿಕೇರಿ : ಪ್ರಸಕ್ತ (2023-24) ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಭೇತಿ ಸಂಬಂಧ “ಆನ್ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ 2023-24 ನೇ ಸಾಲಿಗೆ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ನಲ್ಲಿ https://sevasindhu.karnataka.gov.in ಅರ್ಜಿ ಸಲ್ಲಿಸಬಹುದು.
ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರ್ರಿಶ್ಚಿಯನ್, ಬೌದ್ಧ, ಜೈನ್, ಪಾರ್ಸಿ, ಸಿಖ್). ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು. ಈಗಾಗಲೇ ಇಲಾಖೆ/ಖಾಸಾಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಹ ಅಭ್ಯರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 25 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-225528/ 220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.