ಬೆಂಗಳೂರು : ಮಂಡ್ಯದಲ್ಲಿ ‘ಕಾವೇರಿ’ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಬೆಂಗಳೂರಿಗೆ ನೀರು ಹರಿಸದಂತೆ ಕನ್ನಡ ಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದೆ.
ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರ ಸುಪ್ರೀಂಕೋರ್ಟ್ ಆದೇಶ ಖಂಡಿಸಿ ನೀರು ಸಂಸ್ಕರಣಾ ಘಟಕದ ಬಳಿ ಕನ್ನಡ ಪರ ಸಂಘಟನೆ ಹಾಗೂ ಕಾವೇರಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆ ಕಾಡನಹಳ್ಳಿ ಬಳಿ ಇರುವ ಪಂಪ್ ಹೌಸ್ ಎದುರು ಬೆಂಗಳೂರಿಗೆ ನೀರು ಹರಿಸದಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಟಿ.ಕೆ ಹಳ್ಳಿ ಪಂಪ್ ಹೌಸ್ ಗೆ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕಿ ಯಾವುದೇ ಕಾರಣಕ್ಕೂ ಬೆಂಗಳೂರಿಗೆ ನೀರು ಹರಿಸಬೇಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿವೆ. ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ಮುಂದುವರೆದಿದ್ದು, ಇಂದು ಕನ್ನಡಪರ ಸಂಘಟನೆಗಳು ಸರಣಿ ಪ್ರತಿಭಟನೆಗೆ ಕರೆ ಕೊಟ್ಟಿವೆ.