ನವದೆಹಲಿ: ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಕಾವೇರಿ ನದಿ ನೀರಿನ ವಿಚಾರವಾಗಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡ, ಕಾವೇರಿ ನದಿ ನೀರಿನ ವಿಚಾರವಾಗಿ ಸಂಪೂರ್ಣ ಸಹಕಾರ ನೀಡುತ್ತೇನೆ. ಕಾವೇರಿ ವಿಚಾರವಾಗಿ ಯಾವುದೇ ಸಲಹೆ ಕೊಡುವುದಿಲ್ಲ. ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಯಾವುದೇ ಮಾತನಾಡಲ್ಲ ಎಂದು ತಿಳಿಸಿದ್ದಾರೆ.
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ಪರವಾಗಿ ಹೆಚ್.ಡಿ.ಕುಮರಸ್ವಾಮಿ ಮಾತನಾಡುತ್ತಾರೆ. ಈ ಬಗ್ಗೆ ಹೆಚ್ಚಿನ ಹೇಳಿಕೆ ಕೊಡಲ್ಲ ಎಂದು ಹೇಳಿದರು. ಇನ್ನು ರಾಜ್ಯಸಭೆಯಲ್ಲಿ ಕಾವೇರಿ ವಿಚಾರವಾಗಿ ದೇವೇಗೌಡರು ಮಾತನಾಡಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ಪ್ರತಿಕ್ರಿಯಿಸಿದ ದೇವೇಗೌಡ, ರಾಜ್ಯಸಭೆಯಲ್ಲಿ ನಾನೊಬ್ಬನೇ ಮಾತನಾಡಿದ್ದು, ಕಾವೇರಿ ನದಿ ನೀರಿನ ವಿಚಾರವಾಗಿ ನನ್ನ ಬಾಯಿಂದ ಹೇಳಿಸಬೇಡಿ ಎಂದು ಹೇಳಿದರು.