
ಹೌದು, ಮದ್ಯ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಸೆ.30 ರವರೆಗೆ ಹಲವು ಕಡೆ ಎಣ್ಣೆ ಸಿಗೋದಿಲ್ಲ.ಸೆ.23 ಬೆಳಗ್ಗೆ 6ರಿಂದ ಸೆ.24ರ ಬೆಳಗ್ಗೆ 6ರವರೆಗೆ ಪೂರ್ವ ವಲಯದ ಡಿ.ಜೆ ಹಳ್ಳಿ, ಪುಲಕೇಶಿ ನಗರ, ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಎಣ್ಣೆ ಮಾರಾಟ ಬಂದ್ ಮಾಡಲು ಸೂಚಿಸಲಾಗಿದೆ.
ಸೆ.24ರ ಬೆಳಗ್ಗೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆಯವರೆಗೆ ಪೂರ್ವ ವಿಭಾಗದ ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಹಲಸೂರು ಗೇಟ್ ವ್ಯಾಪ್ಟಿ ಪೊಲೀಸ್ ಠಾಣೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈಶಾನ್ಯ ವಿಭಾಗದ ಯಲಹಂಕ ಉಪನಗರ, ಕೂಡಿಗೆಹಳ್ಳಿ, ಯಲಹಂಕ, ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.23ರ ಸಂಜೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆಯವರೆಗೆ, ಕೇಂದ್ರ ವಿಭಾಗದ ಹೈಗ್ರೌಂಡ್ ಠಾಣೆ ವ್ಯಾಪ್ತಿಯಲ್ಲಿ ಸೆ.30ರ ಬೆಳಗ್ಗೆ 6ರಿಂದ ಅಕ್ಟೋಬರ್.1ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.

