ಗಮನಿಸಿ: ವ್ಯಾಪಾರ ನಡೆಸಲು ಕಾರ್ಮಿಕರ ಲೈಸೆನ್ಸ್ ಕಡ್ಡಾಯ

Labour Card | ಒಂದು ಕಾರ್ಮಿಕ ಕಾರ್ಡ್ ಇದ್ದರೆ 19 ಸ್ಕೀಮ್ ಗಳ ಲಾಭ....!! ಕಟ್ಟಡ ಕೂಲಿ ಕಾರ್ಮಿಕರಿಗೆ ಇಲ್ಲಿದೆ ಭರ್ಜರಿ ಅನುಕೂಲ : ಆ ಸೌಲಭ್ಯಗಳನ್ನು ಪಡೆಯೋದು ಹೇಗೆ ಗೊತ್ತಾ ...

ಶಿವಮೊಗ್ಗ: ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅನುಸಾರ ಎಲ್ಲ ಅಂಗಡಿ, ವಾಣಿಜ್ಯ ಸಂಸ್ಥೆಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಹಾಸನ ಪ್ರಾದೇಶಿಕ ಕಚೇರಿ ಆಯುಕ್ತ ಸೋಮಣ್ಣ ಹೇಳಿದರು.

ಶಿವಮೊಗ್ಗ ನಗರದ ಸೂಡಾ ಕಚೇರಿಯ ಕಟ್ಟಡದಲ್ಲಿರುವ ಕಾರ್ಮಿಕ ಇಲಾಖೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಯಾವುದೇ ಕಾರ್ಮಿಕರು ಇಲ್ಲದಿದ್ದರೂ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವುದು, ಕಾರ್ಮಿಕರ ಸಂಖ್ಯೆಗೆ ಅನುಗುಣವಾಗಿ ಕಾನೂನುಬದ್ಧ ಸೌಲಭ್ಯ ಒದಗಿಸುವುದು ಕಾಯ್ದೆಯ ಉದ್ದೇಶ ಆಗಿದೆ ಎಂದು ತಿಳಿಸಿದರು.

ಎಲ್ಲ ಅಂಗಡಿ ಮಾಲೀಕರು ಹಾಗೂ ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾರ್ಮಿಕ ಇಲಾಖೆ ಜಾಲತಾಣದಲ್ಲಿ ನೋಂದಣಿ ಮಾಡಿಸಿ ಮಾಹಿತಿ ದಾಖಲಿಸಬೇಕು. ಅಂಗಡಿ ವಿಳಾಸ ಹಾಗೂ ಮಾಲೀಕರ ಗುರುತೀನ ಚೀಟಿ ಸೇರಿ ಅಗತ್ಯ ದಾಖಲಾತಿಗಳೊಂದಿಗೆ ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದು ಎಂದರು.

ನೋಂದಣಿ ಪ್ರಕ್ರಿಯೆಯಲ್ಲಿ ಸಮಸ್ಯೆ ಕಂಡುಬಂದಲ್ಲಿ ಇಲಾಖೆ ಸಹಾಯವಾಣಿ 08029753059 ಅಥವಾ 155214 ಅಥವಾ ಹತ್ತಿರದ ಕಾರ್ಮಿಕ ಇಲಾಖೆ ಕಚೇರಿ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದು ನೋಂದಣಿ ಮಾಡಿಸಬಹುದಾಗಿದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read