BREAKING : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ : ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ‘HDK’

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಇಂದು ದೆಹಲಿಯಲ್ಲಿ ಅಮಿತ್ ಶಾ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ‘ ಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲವು ವಿಷಯಗಳ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ ಮಾಡಿದ್ದೇವೆ, ಮೈತ್ರಿ ಮಾಡಿಕೊಳ್ಳುವ ಬಗೆಗಿನ ಕೆಲವು ಫಾರ್ಮಾಲಿಟಿಸ್ ಬಗ್ಗೆ ಚರ್ಚಿಸಿದ್ದೇವೆ . ಈ ಬಗ್ಗೆ ಹಂತ ಹಂತವಾಗಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ, ಸದ್ಯ, ಮೊದಲ ಹಂತದ ಮಾತುಕತೆ ಆಗಿದೆ ಎಂದರು.

ನಮಗೆ ಎಷ್ಟು ಸೀಟ್ ಕೊಡುತ್ತಾರೆ ಎಂಬುದು ಮುಖ್ಯ ಅಲ್ಲ, ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ . ಮೈತ್ರಿ  ಸುಗಮವಾಗಿ ನಡೆಯಲಿದೆ ಎಂದರು.

ಇನ್ನೂ, ಕಾವೇರಿ ನದಿ ವಿವಾದದ ಬಗ್ಗೆ ಕೂಡ ಮಾತನಾಡಿದ್ದೇವೆ. ರಾಜ್ಯದ ರೈತರಿಗೆ ಮಾರಕವಾಗುವ ರೀತಿ ಸರ್ಕಾರ ನಡೆದುಕೊಂಡಿದೆ. ಆಗಸ್ಟ್ ನಲ್ಲೇ ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಹೇಳಿದ್ದೆ, ಸರ್ಕಾರ ನನ್ನ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ, ರಾಜ್ಯ ಸರ್ಕಾರ ರೈತರ ಜೀವನದ ಜತೆ ಚೆಲ್ಲಾಟವಾಡುತ್ತಿದೆ ಎಂದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read