HomeKarnatakaಆಸ್ತಿ ಮಾರಾಟ, ಖರೀದಿ, ನೋಂದಣಿದಾರರಿಗೆ ಗುಡ್ ನ್ಯೂಸ್: ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ...

ಆಸ್ತಿ ಮಾರಾಟ, ಖರೀದಿ, ನೋಂದಣಿದಾರರಿಗೆ ಗುಡ್ ನ್ಯೂಸ್: ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯ ನಿರ್ವಹಣೆ

ಬೆಂಗಳೂರು: ನಾಳೆಯಿಂದ ಸೆಪ್ಟಂಬರ್ 30ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿ ವಿಸ್ತರಣೆ ಮಾಡಲಾಗಿದೆ.  ಬೆಳಗ್ಗೆ 8 ಯಿಂದ ರಾತ್ರಿ 8 ಗಂಟೆಯವರೆಗೆ ಉಪ ನೋಂದಣಾಧಿಕಾರಿ ಕಚೇರಿ ಕೆಲಸದ ಅವಧಿ ವಿಸ್ತರಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಕಚೇರಿ ಕಾರ್ಯನಿರ್ವಹಣಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸೆಪ್ಟಂಬರ್ 23ರಂದು ನಾಲ್ಕನೇ ಶನಿವಾರ ಕೂಡ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲಿದೆ. ಹೆಚ್ಚುವರಿ ಕೆಲಸದ ಅವಧಿ ಸೆಪ್ಟೆಂಬರ್ 30ರವರೆಗೆ ಮಾತ್ರ ಅನ್ವಯವಾಗಲಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 1ರಿಂದ ಮಾರ್ಗಸೂಚಿ ದರ ಏರಿಕೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಸ್ತಿ ನೋಂದಣಿಗೆ ಜನ ಮುಗಿಬಿದ್ದ ಕಾರಣ ಕಾವೇರಿ- 2 ಸರ್ವರ್ ಕ್ರ್ಯಾಶ್ ಆಗಿ ತೊಂದರೆಯಾಗಿತ್ತು. ಅ. 1 ರಿಂದ ಮಾರುಕಟ್ಟೆ ದರಕ್ಕೆ ತಕ್ಕಂತೆ ಆಸ್ತಿ ಮಾರ್ಗಸೂಚಿ ದರ ಶೇಕಡ 25 ರಿಂದ 30ರಷ್ಟು ಹೆಚ್ಚಳವಾಗಲಿದೆ. ನೋಂದಣಿ ಶುಲ್ಕದಲ್ಲೂ ಏರಿಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 1ಕ್ಕೆ ಮೊದಲೇ ಆಸ್ತಿ ನೋಂದಣಿಗೆ ಜನ ಮುಗಿಬಿದ್ದಿದ್ದಾರೆ. ಈ ಕಾರಣ ರಾಜ್ಯಾದ್ಯಂತ ಕಾವೇರಿ -2 ತಂತ್ರಾಂಶ ಕುಸಿತವಾಗಿದ್ದು, ಸರ್ವರ್ ಸಮಸ್ಯೆಯಿಂದ ನೋಂದಣಿಗೆ ತೊಂದರೆ ಆಗಿತ್ತು. ಹೀಗಾಗಿ ಕಚೇರಿ ಅವಧಿ ವಿಸ್ತರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular