ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಪ್ರಮಾಣ ಪತ್ರ ಪಡೆಯಬೇಕೆಂದು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಗಳನ್ನು ಪ್ರಶ್ನಿಸಿ ಪ್ರಜ್ಞಾ ಎಜುಕೇಶನ್ ಸೊಸೈಟಿ ಸೇರಿದಂತೆ 22 ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಅಶೋಕ ಎಸ್. ಕಿಣಿ ಅವರ ಪೀಠ ಈ ಆದೇಶ ನೀಡಿದೆ.
ಶಿಕ್ಷಣ ಇಲಾಖೆಯಿಂದ 2020ರ ನವೆಂಬರ್ 10 ಮತ್ತು 2021ರ ಮಾರ್ಚ್ 10ರಂದು ಸುತ್ತೋಲೆ ಹೊರಡಿಸಿ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿ ಪ್ರಮಾಣ ಪತ್ರ ಪಡೆದುಕೊಳ್ಳಬೇಕು. ರಾಷ್ಟ್ರೀಯ ಕಟ್ಟಡ ಸಂಹಿತೆ ಪ್ರಕಾರ ಇಂಜಿನಿಯರ್ ಗಳಿಂದ ಮೌಲ್ಯಮಾಪನ ಮಾಡಿಸಬೇಕೆಂದು ತಿಳಿಸಲಾಗಿತ್ತು. ಖಾಸಗಿ ಶಾಲೆಗಳಿಗೆ ಅಗ್ನಿ ಸುರಕ್ಷತಾ ಪತ್ರ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆಯ 2 ಪ್ರತ್ಯೇಕ ಸುತ್ತೋಲೆಗಳನ್ನು ಹೈಕೋರ್ಟ್ ರದ್ದುಪಡಿಸಿದೆ.