ಮೈಸೂರು: ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 400 ಪಶು ವೈದ್ಯರ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದ್ದು, ಶೀಘ್ರವೇ ಕೆ.ಪಿ.ಎಸ್.ಸಿ.ಯಿಂದ ನೇಮಕಾತಿ ನಡೆಯಲಿದೆ ಎಂದು ಹೇಳಿದ್ದಾರೆ.
250 ಪಶು ನಿರೀಕ್ಷಕರನ್ನು ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಸಿಬ್ಬಂದಿ ಇಲ್ಲದ ಪಶು ಆಸ್ಪತ್ರೆಗಳಿಗೆ ನಿಯೋಜಿಸಲಾಗುವುದು. ಚರ್ಮಗಂಟು ರೋಗ ಸದ್ಯ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಲಾಖೆಯಿಂದ 4 ಲಕ್ಷ ಡೋಸ್ ಲಸಿಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾಲು ಬಾಯಿ ರೋಗ ತಡೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಪಶುಗಳಿಗೆ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.