HomeIndiaಇಂದು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಇಂದು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ವಾರಣಾಸಿಯ ಈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು 30 ಎಕರೆ ಪ್ರದೇಶದಲ್ಲಿ ಸುಮಾರು 450 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಕ್ರೀಡಾಂಗಣವನ್ನು ಅರ್ಧಚಂದ್ರಾಕಾರದ ಛಾವಣಿ, ತ್ರಿಶೂಲ್ ಆಕಾರದ ಫ್ಲಡ್ ಲೈಟ್ ಗಳು ಮತ್ತು ಘಾಟ್ ಮೆಟ್ಟಿಲು ಆಧಾರಿತ ಆಸನ ವ್ಯವಸ್ಥೆಯೊಂದಿಗೆ ವಿನ್ಯಾಸಗೊಳಿಸಲಾಗುವುದು. ಈ ಕ್ರೀಡಾಂಗಣವು 30,000 ಪ್ರೇಕ್ಷಕರ ಆಸನ ಸಾಮರ್ಥ್ಯವನ್ನು ಹೊಂದಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾರ್ ಕೌನ್ಸಿಲ್ ಆಫ್ ಇಂಡಿಯಾ ಸೆಪ್ಟೆಂಬರ್ 23 ಮತ್ತು 24 ರಂದು ‘ನ್ಯಾಯ ವಿತರಣಾ ವ್ಯವಸ್ಥೆಯಲ್ಲಿ ಉದಯೋನ್ಮುಖ ಸವಾಲುಗಳು’ ಕುರಿತು ಅಂತರರಾಷ್ಟ್ರೀಯ ವಕೀಲರ ಸಮ್ಮೇಳನವನ್ನು ಆಯೋಜಿಸಿದೆ, ಇದನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸುವುದರ ಜೊತೆಗೆ, ಉತ್ತರ ಪ್ರದೇಶದಾದ್ಯಂತ ಸುಮಾರು 1,115 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ 16 ಅಟಲ್ ವಸತಿ ಶಾಲೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.

ತಮ್ಮ ಒಂದು ದಿನದ ಭೇಟಿಯಲ್ಲಿ, ಪಿಎಂ ಮೋದಿ ಅವರು ಕಾಶಿ ಸಂಸದ್ ಸಾಂಸ್ಕೃತಿಕ ಉತ್ಸವ 2023 ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular