HomeKarnatakaBIG NEWS: ಸರ್ಕಾರಿ ಶಾಲೆ ಆವರಣದಲ್ಲಿ ವಾಮಾಚಾರ; ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲು

BIG NEWS: ಸರ್ಕಾರಿ ಶಾಲೆ ಆವರಣದಲ್ಲಿ ವಾಮಾಚಾರ; ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲು

ಚಿತ್ರದುರ್ಗ: ಸರ್ಕಾರಿ ಶಾಲೆಯ ಆವರಣದಲ್ಲಿಯೇ ವಾಮಾಚಾರ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ನಡೆದಿದೆ.

ತಿಮ್ಮಪ್ಪನಹಳ್ಳಿಯ ಸರ್ಕಾರಿ ಶಾಲೆಯ ಆವರಣದಲ್ಲಿ ವಾಮಾಚಾರ ಮಾಡಲಾಗಿದೆ. ್ಮುಖ್ಯ ಶಿಕ್ಷಕರ ಕೊಠಡಿ ಬಳಿ ತಲೆ ಬುರುಡೆ, ನಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂದಿನಂತೆ ಬೆಳಿಗ್ಗೆ ಶಾಲೆಗೆ ಬಂದ ವಿದ್ಯಾರ್ಥಿಗಳು ಇದನ್ನು ನೋಡಿ ಕಂಗಾಲಾಗಿದ್ದಾರೆ. ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ವಾಮಾಚಾರಕ್ಕೆ ಬಳಿಸಿರುವ ಬುರುಡೆ ಹಾಗೂ ಇನ್ನಿತರ ವಸ್ತುಗಳನ್ನು ತೆರವುಗೊಳಿಸಿ, ಶಾಲಾ ಆವರಣ ಸ್ವಚ್ಛಗೊಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular