
ಜಮೀರ್ ಪಿಂಜಾರ (22) ಎಂಬಾತ ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದನು. ಆದರೆ ಇದ್ದಕ್ಕಿದ್ದಂತೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಈತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾದರೂ ಮಾರ್ಗಮಧ್ಯೆಯೇ ಈತನ ಪ್ರಾಣಪಕ್ಷಿ ಹಾರಿ ಹೋಗಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.

