HomeKarnataka`ಕಾಯಂ’ ನಿರೀಕ್ಷೆಯಲ್ಲಿದ್ದ ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

`ಕಾಯಂ’ ನಿರೀಕ್ಷೆಯಲ್ಲಿದ್ದ ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ತುಮಕೂರು : ಕಾಯಂ ನಿರೀಕ್ಷೆಯಲ್ಲಿದ್ದ ರಾಜ್ಯದ ಎಲ್ಲಾ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ ಎಲ್ಲಾ ಪೌರಕಾರ್ಮಿಕರನ್ನು ಕಾಯಂ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ತುಮಕೂರು ಮಹಾನಗರ ಪಾಲಿಕೆಯಿಂದ ದಿಬ್ಬೂರಿನ ಬಿ.ಹೆಚ್. ಪಾಳ್ಯದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲ ಪೌರಕಾರ್ಮಿಕರನ್ನು ಕಾಯಂ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರು ಮಹಾನಗರ ಪಾಲಿಕೆಯ 121 ಪೌರಕಾರ್ಮಿಕರನ್ನು ಕಾಯಂ ಮಾಡಲಾಗಿದ್ದು, ವಾಲ್ವೆಮೆನ್, ಚಾಲಕರು, ಲೋಡರ್ಸ್, ಹೆಲ್ಪರ್ಸ್ ಗಳ ಕಾಯಂಗಳ ಬೇಡಿಕೆ ಇದ್ದು, ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular