alex Certify Gruha Lakshmi Scheme : ಯಜಮಾನಿಯರೇ ಗಮನಿಸಿ : `ಇ-ಕೆವೈಸಿ’ ಮಾಡಿಸದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಗೃಹಲಕ್ಷ್ಮೀ’ ಹಣ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Gruha Lakshmi Scheme : ಯಜಮಾನಿಯರೇ ಗಮನಿಸಿ : `ಇ-ಕೆವೈಸಿ’ ಮಾಡಿಸದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಗೃಹಲಕ್ಷ್ಮೀ’ ಹಣ!

ಬೆಂಗಳೂರು : ಮನೆಯ ಯಜಮಾನಿಗೆ ರಾಜ್ಯ ಸರಕಾರದಿಂದ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಹಲವರಿಗೆ ಮೊದಲ ಕಂತು ಬಂದಿದ್ದು, ಹಲವರಿಗೆ ಇನ್ನೂ ಹಣ ಖಾತೆಗೆ ಜಮಾ ಆಗಿಲ್ಲ. ಹೀಗಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದವರು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಿದ್ರೆ ಮಾತ್ರ ಹಣ ಬರಲಿದೆ.

ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಗೃಹಲಕ್ಷ್ಮೀ ಹಣ ಬರಬೇಕಾದ್ರೆ ತಪ್ಪದೇ ಈ ಕೆಲಸಗಳನ್ನು ಮಾಡಿ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಯಿಂದ ಕಾರ್ಡ್‌ದಾರರ ಮಾಹಿತಿಯನ್ನು ಆನ್‌ಲೈನ್‌ ಹಾಗೂ ಆಫ್ಲೈನ್‌ ವ್ಯವಸ್ಥೆಯಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ ರೂಪಿಸಿರುವ ಕುಟುಂಬ ವೆಬ್‌ಸೈಟ್‌ಗೆ ನೀಡಲಾಗಿದೆ. ಇ-ಕೆವೈಸಿ ಮಾಡದ ಕಾರ್ಡ್‌ಗಳಿಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ ಹೀಗಾಗಿ ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ

ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.

ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು.

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಆಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ , ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ.

 ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ನಲ್ಲಿರುವ ಮಾಹಿತಿ ಹೊಂದಾಣಿಕೆ ಆಗಿದೆಯೇ ಎನ್ನುವುದನ್ನು ದೃಢಪಡಿಸಿಕೊಳ್ಳಿ, ಇಲ್ಲವಾದಲ್ಲಿ ಇದನ್ನು ತಿದ್ದುಪಡಿ ಕೂಡ ಮಾಡಿಸಬೇಕು.

ಇದುವರೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ನಿಂದ ಹಣ ಪಡೆಯಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...