ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಸಂಘಟನೆಗಳ ಪ್ರತಿಭಟನೆ ಮುಂದುವರೆದಿದೆ. ಇಂದು ಕೂಡ ರೈತರು ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ ಭುಗಿಲೇಳಲಿದೆ.
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ಪ್ರತಿಭಟನೆಗಳು ತೀವ್ರಗೊಂಡಿದ್ದು, ನಿನ್ನೆ ಮಂಡ್ಯ, ಮದ್ದೂರು ಬಂದ್ ಗೆ ಕರೆ ನೀಡಲಾಗಿತ್ತು. ಇಂದು ಕೂಡ ಮಂಡ್ಯದಲ್ಲಿ ಪ್ರತಿಭಟನೆ ಮುಂದುವರೆಯಲಿದೆ.
ಕಾವೇರಿ ನದಿ ನೀರಿನ ರಕ್ಷಣಾ ಹೋರಾಟ ಸಮಿತಿ, ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ಭೂಮಿತಾಯಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಗೆ ಶ್ರೀರಂಗಪಟ್ಟಣದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆಯಲು ಪ್ರತಿಭಟನಾಕಾರರು ಪ್ಲಾನ್ ಮಾಡಿದ್ದಾರೆ.