ದಾವಣಗೆರೆ: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದಾಗಿ ರೈತರು ಕಂಗೆಟ್ಟಿದ್ದು, ಬೆಳೆಗಳಿಗೆ ನೀರು ಹರಿಸಲಾಗದೇ ಸಂಕಷ್ಟಕ್ಕೀಡಾಗಿದ್ದಾರೆ. ಒಂದೆಡೆ ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ ಗೆ ಕರೆ ನೀಡಿರುವ ಬೆನ್ನಲ್ಲೇ ಅತ್ತ ದಾವಣಗೆರೆಯಲ್ಲಿ ಭದ್ರಾ ನೀರಿಗಾಗಿ ಬಂದ್ ಗೆ ಕರೆ ಕೊಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ನಿಂದ ಕಾಲುವೆಗೆ ನೀರು ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ದಾವಣಗೆರೆ ಭಾಗದಲ್ಲಿ ರೈತರಿಗೆ ಜಮೀನಿಗೆ ನೀರಿಲ್ಲದಾಗಿದೆ. ಇದರಿಂದ ರೊಚ್ಚಿಗೆದ್ದಿರುವ ರೈತರು ಸೆ.25ರಂದು ದಾವಣಗೆರೆ ಬಂದ್ ಗೆ ಕರೆ ನೀಡಿದ್ದಾರೆ.
ಭದ್ರಾ ಕಾಲುವೆಗೆ ನೀರು ಹರಿಸುವುದಾಗಿ ಲಿಖಿತ ಆದೇಶ ಹೊರಡಿಸುವಂತೆ ಆಗ್ರಹಿಸಿ ಭಾರತೀಯ ರೈತ ಒಕ್ಕೂಟದಿಂದ ನಾಳೆ ದಾವಣಗೆರೆ ಬಂದ್ ಗೆ ಕರೆ ನೀಡಲಾಗಿದೆ.
ಕಾವೇರಿ ನೀರಿಗಾಗಿ ಸೆ.26ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ ಗೆ ಕರೆ ನೀಡಿದೆ. ರಾಜಧಾನಿ ಬೆಂಗಳೂರು ಮಂಗಳವಾರ ಸಂಪೂರ್ಣ ಸ್ತಬ್ಧಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಈ ಮಧ್ಯೆ ನೀರಿಗಾಗಿ ರೈತ ಪರ ಸಂಘಟನೆಗಳು ಇದೀಗ ದಾವಣಗೆರೆ ಬಂದ್ ಗೆ ಕರೆ ನೀಡಿವೆ.