HomeKarnatakaಛೇ…ಪತಿ, ಮಕ್ಕಳೆದುರೇ ಮಹಿಳೆ ಮೇಲೆ 'ಗ್ಯಾಂಗ್ ರೇಪ್' : ಮನನೊಂದ ದಂಪತಿಗಳು ಆತ್ಮಹತ್ಯೆಗೆ ಶರಣು

ಛೇ…ಪತಿ, ಮಕ್ಕಳೆದುರೇ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’ : ಮನನೊಂದ ದಂಪತಿಗಳು ಆತ್ಮಹತ್ಯೆಗೆ ಶರಣು

ಲಕ್ನೋ : ಮಕ್ಕಳು, ಪತಿ ಎದುರೇ ಮಹಿಳೆ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಇದರಿಂದ ಮನನೊಂದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅಮಾನವೀಯ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಕೆಲವೇ ಗಂಟೆಗಳ ನಂತರ ಪತಿ ಮತ್ತು ಆತನ ಪತ್ನಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದ್ದು, ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

30 ವರ್ಷದ ವ್ಯಕ್ತಿ ಮತ್ತು ಆತನ 27 ವರ್ಷದ ಪತ್ನಿ ಗುರುವಾರ ವಿಷ ಸೇವಿಸಿದ್ದಾರೆ. ಪತಿ ಅದೇ ದಿನ ಮೃತಪಟ್ಟರೆ, ಪತ್ನಿ ಗೋರಖ್ಪುರದ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು ಎಂದು ಬಸ್ತಿ ಎಸ್ಪಿ ಗೋಪಾಲ್ ಕೃಷ್ಣ ಶನಿವಾರ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟೆಂಬರ್ 21 ರ ಮಧ್ಯರಾತ್ರಿ ಮನೆಗೆ ನುಗ್ಗಿದ ಇಬ್ಬರು ಪುರುಷರು ಗಂಡ ಹಾಗೂ ಮಕ್ಕಳನ್ನು ಕಟ್ಟಿ ಹಾಕಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದಂಪತಿಯ ಸಂಬಂಧಿಕರು ಆರೋಪಿಸಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ದಂಪತಿಗಳು ವಿಡಿಯೋ ರೆಕಾರ್ಡ್ ಮಾಡಿದ್ದು, ಅದರಲ್ಲಿ ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತ ವ್ಯಕ್ತಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಇಬ್ಬರ ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.ಆರೋಪಿಗಳಾದ ಆದರ್ಶ್ (25) ಮತ್ತು ತ್ರಿಲೋಕಿ (45) ಅವರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.ದಂಪತಿಗೆ ಮೂವರು ಮಕ್ಕಳಿದ್ದು, ಎಂಟು ಮತ್ತು ಆರು ವರ್ಷದ ಇಬ್ಬರು ಗಂಡು ಮಕ್ಕಳು ಮತ್ತು ಒಂದು ವರ್ಷದ ಮಗಳು ಇದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular