ಮಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಮಕ್ಕಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯಾಗುತ್ತಿದ್ದು, ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಪ್ರಯತ್ನ ನಡೆಯುತ್ತಿದ್ದು, ಶೀಘ್ರವೇ ಇದರ ಬಗ್ಗೆ ಕ್ರಮ ವಹಿಸುತ್ತೇವೆ. ಈಗ ಇರುವ ವ್ಯವಸ್ಥೆಯಲ್ಲಿ ಶಾಲಾ ಮಕ್ಕಳಗಿಎ ಬ್ಯಾಗ್ ತುಂಬಾ ಹೊರೆಯಾಗುತ್ತಿದೆ. ಈಗ ಇರುವ ಭಾರಕ್ಕಿಂತ ಕಡಿಮೆ ಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 1,6000 ಅನಧಿಕೃತ ಶಾಲೆಗಳು ಇದ್ದು, ದಾಖಲೆಗಳು ಸರಿಯಿಲ್ಲದ ಕಾರಣ ಈ ಶಾಲೆಗಳನ್ನು ಮುಚ್ಚಿದ್ರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಬಹುದು. ಹೀಗಾಗಿ ಅವರಿಗೆ ದಾಖಲೆಗಳನ್ನು ಸರಿಪಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.