ಬೆಂಗಳೂರು : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವಲಂಬಿತರ ಸದಸ್ಯರ ಮಾಹಿತಿಯನ್ನು ಹೆಚ್.ಆರ್ ಎಂ.ಎಸ್ ತಂತ್ರಾಂಶದಲ್ಲಿ ಇಂದೀಕರಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಸೂಚನೆ ನೀಡಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರ ಸದಸ್ಯರನ್ನು ಯೋಜನೆಯಡಿಯಲ್ಲಿ ನೋಂದಾಯಿಸಲು ಹೆಚ್.ಆರ್.ಎಂ.ಎಸ್ 1.0 Jogos (Web application) https://hrms.karnataka.gov.in URL uses are ಮೊಬೈಲ್ https://hrmsenroll.karnataka.gov.in URL ಮೂಲಕ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಸಲಾಗಿದೆ.
ಈ ಸಂಬಂಧ ಕೈಪಿಡಿಯ ಅಂಕ್ ಅನ್ನು (ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ) ಇಲಾಖೆಯ ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅದರಲ್ಲಿ ಹಂತ ಹಂತವಾಗಿ ನೋಂದಾಯಿಸುವ ವಿಧಾನ ವಿವರಿಸಲಾಗಿದೆ. ಅದರಂತೆ ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು / ಕಛೇರಿಗಳ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರ ಅವಶ್ಯಕ ಮಾಹಿತಿಯನ್ನು ಡಿ.ಡಿ.ಓ ಹಂತದಲ್ಲಿ ಹೆಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ಇಂಧೀಕರಿಸುವಂತೆ ಈ ಮೂಲಕ ಸೂಚಿಸಲಾಗಿದೆ.