HomeKarnatakaತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ನವವಿವಾಹಿತ ಸಾವು

ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ನವವಿವಾಹಿತ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ನವ ವಿವಾಹಿತ ಬಲಿಯಾಗಿದ್ದಾರೆ. ಜಯನಗರದ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಯಲಚೇನಹಳ್ಳಿಯ ಬೈಕ್ ಸವಾರ ಯಶವಂತ್(26) ಮೃತಪಟ್ಟವರು ಎಂದು ಹೇಳಲಾಗಿದೆ. ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಸದ ಲಾರಿಯನ್ನು ಚಾಲಕ ಪಾರ್ಕಿಂಗ್ ಮಾಡಿದ್ದಾನೆ. ಬೈಕ್ ನಿಯಂತ್ರಣ ಸಿಗದೇ ಲಾರಿ ಹಿಂಬದಿಗೆ ಡಿಕ್ಕಿಯಾಗಿ ಯಶವಂತ್ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಯನಗರದ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ರಾತ್ರಿ 12 ಗಂಟೆಗೆ ಘಟನೆ ನಡೆದಿದೆ. ಅವೈಜ್ಞಾನಿಕವಾಗಿ ಲಾರಿ ಪಾರ್ಕಿಂಗ್ ಮಾಡಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ. ಮೂರು ಗಂಟೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಪೋಲೀಸರು ಹೊರಗೆ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular