HomeKarnatakaPSI ನೇಮಕಾತಿ ಅಕ್ರಮ; ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು

PSI ನೇಮಕಾತಿ ಅಕ್ರಮ; ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಆರೋಪದಲ್ಲಿ ಜೈಲು ಪಾಲಾಗಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

5 ಲಕ್ಷ ರೂಪಾಯಿ ಬಾಂಡ್, ಇಬ್ಬರು ಶ್ಯೂರಿಟಿ ಮೇಲೆ ಅಮೃತ್ ಪಾಲ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣದ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದು, ಕೋರ್ಟ್ ಅನುಮತಿಯಿಲ್ಲದೇ ವಿದೇಶಕ್ಕೆ ತೆರಳಬಾರದು ಸೇರಿದಂತೆ ಹಲವು ಷರತ್ತುಗಳನ್ನು ಹಾಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪೊಲೀಸ್ ಹಿರಿಯ ಅಧಿಕಾರಿಗಳೇ ನೇರವಾಗಿ ಅಕ್ರಮದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಅಮೃತ್ ಪಾಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಜೈಲುಪಾಲಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular