HomeKarnatakaʼಕರ್ನಾಟಕʼ ಸುವರ್ಣ ಮಹೋತ್ಸವ ಸಂಭ್ರಮ: ವಿಶಿಷ್ಟ ಲೋಗೋ ರಚಿಸಿ ಬಹುಮಾನ ಗೆಲ್ಲಿ !

ʼಕರ್ನಾಟಕʼ ಸುವರ್ಣ ಮಹೋತ್ಸವ ಸಂಭ್ರಮ: ವಿಶಿಷ್ಟ ಲೋಗೋ ರಚಿಸಿ ಬಹುಮಾನ ಗೆಲ್ಲಿ !

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ‘ಕರ್ನಾಟಕ ಸಂಭ್ರಮ 50̧’ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರಗು ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ.

ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ(ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ.25000 ಗಳ ಬಹುಮಾನವನ್ನು ನಿಗದಿಪಡಿಸಲಾಗಿದೆ.

ಲಾಂಛನ(ಲೋಗೋ)ದ ಮಾದರಿಯನ್ನು ಕಳುಹಿಸಲು ದಿ: 30-09-2023 ರವರೆಗೆ ಅವಕಾಶವಿದ್ದು, ಆಸಕ್ತರು ಈ ಕುರಿತು ಅಗತ್ಯ ಮಾಹಿತಿಯನ್ನು ಇಲಾಖೆಯ ಜಾಲತಾಣ https://www.kannadasiri.karnataka.gov.in ದಲ್ಲಿ ಪಡಯಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular