ಬೆಂಗಳೂರು: ಕಾವೇರಿ ನೀರಿಗಾಗಿ ನಾಳೆ ಕರೆ ನೀಡಿರುವ ಬೆಂಗಳೂರು ಬಂದ್ ಗೆ ಅವಕಾಶವಿಲ್ಲ. ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿಗೆ ಬರಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ದಯಾನಂದ್, ಬೆಂಗಳೂರು ನಗರದಾದ್ಯಂತ ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಒತ್ತಾಯಪೂರ್ವಕವಾಗಿ ಬಂದ್ ಮಾಡುವಂತಿಲ್ಲ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲ. ಹೈಕೋರ್ಟ್ ಆದೇಶದ ಪ್ರಕಾಶ ಬಂದ್ ಗೆ ಅವಕಾಶವಿಲ್ಲ. ಪ್ರತಿಭಟನಾಕಾರರಿಗೆ ಕೋರ್ಟ್ ಆದೇಶ ಪ್ರತಿ ತೋರಿಸಲಾಗುವುದು ಎಂದರು.
ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು. ಬಲವಂತವಾಗಿ ಅಂಗಡಿ, ಹೋಟೆಲ್, ಕಚೇರಿಗಳನ್ನು ಬಂದ್ ಮಾಡುವಂತಿಲ್ಲ ಎಂದು ತಿಳಿಸಿದರು.