alex Certify ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳ ಹಲವು ಕಡೆ ಸೆ. 26ರಂದು ಭಾರಿ ಮಳೆಯಾಗುವ ಸಂಭವ ಇದೆ.

ಸೆಪ್ಟೆಂಬರ್ 29, 30 ರಂದು ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಬಿರುಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ವರೆಗೆ ಇರುವ ಸಾಧ್ಯತೆ ಇದೆ.

ಸೆ. 27ರ ಬೆಳಗ್ಗೆವರೆಗೆ ಕರಾವಳಿಯ ಬಹುತೇಕ ಮತ್ತು ಒಳನಾಡಿನ ಕೆಲವೆಡೆ ಹಗುರದಿಂದ ಕೂಡಿದ ಮಳೆಯಾಗುವ ಸಂಭವ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...