ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಮನೆಯ ಯಜಮಾನಿಯರ ಖಾತೆಗೆ ಮೊದಲ ಕಂತು ಬಿಡುಗಡೆಯಾಗಿದೆ. ಆದರೆ ಹಲವರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಹೀಗಾಗಿ ಫಲಾನುಭವಿಗಳು ತಪ್ಪದೇ ಇ-ಕೆವೈಸಿ, ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಗೃಹಲಕ್ಷ್ಮಿಯೋಜನೆಗೆ ಅರ್ಜಿ ಸಲ್ಲಿಸಿಕೊಂಡು ಮೊದಲನೆ ಕಂತು ಬಾರದೆ ಇರುವ ಮಹಿಳೆಯರು ತಮ್ಮ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಲಿಂಕ್ ಗಳನ್ನು ಸರಿಪಡಿಸಿಕೊಂಡರೆ, ಒಂದನೇ ಕಂತು ಬಾರದೇ ಇರುವ ಮಹಿಳೆಯರಿಗೆ ಎರಡು ಕಂತಿನ ಹಣ ಅವರ ಖಾತಗೆ ಜಮಾ ಆಗಲಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್‌ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಯಿಂದ ಕಾರ್ಡ್‌ದಾರರ ಮಾಹಿತಿಯನ್ನು ಆನ್‌ಲೈನ್ ಹಾಗೂ ಆಫ್ಲೈನ್ ವ್ಯವಸ್ಥೆಯಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ ರೂಪಿಸಿರುವ ಕುಟುಂಬ ವೆಬ್‌ಸೈಟ್‌ಗೆ ನೀಡಲಾಗಿದೆ. ಇ-ಕೆವೈಸಿ ಮಾಡದ ಕಾರ್ಡ್‌ಗಳಿಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ ಹೀಗಾಗಿ ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ
ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.
ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು.
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಆಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ , ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ.