ಇಂದು ಬಾಂಗ್ಲಾದೇಶ – ನ್ಯೂಜಿಲ್ಯಾಂಡ್ ನಡುವಣ ಅಂತಿಮ ಏಕದಿನ ಪಂದ್ಯ

Bangladesh vs New Zealand, 2nd ODI: Highlights from Dhaka - India Today

ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಅಂತಿಮ ಏಕದಿನ ಪಂದ್ಯ ಇಂದು ಢಾಕಾದಲ್ಲಿ ನಡೆಯಲಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದು, ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಜಯಭೇರಿ ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ಗೆದ್ದರೆ ಸರಣಿ ಸಮಬಲವಾಗಲಿದೆ.

ಲಾಕಿ ಫರ್ಗುಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಈ ಪಂದ್ಯವನ್ನು ಗೆದ್ದು ಸರಣಿ ತನ್ನದಾಗಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಇನ್ನೇನು ವಿಶ್ವಕಪ್ ಶುರುವಾಗಲು ಕೆಲವೇ ದಿನಗಳಿದ್ದು, ಅಹ್ಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ.

ಕಳೆದ ವಿಶ್ವಕಪ್ ಫೈನಲ್ ನಲ್ಲಿ ಈ  ಎರಡು ತಂಡಗಳ ನಡುವೆ ನಡೆದ ರೋಚಕ ಪಂದ್ಯವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಪಂದ್ಯ ಡ್ರಾ ಆಗಿ ನಂತರ ಸೂಪರ್ ಓವರ್ ಕೂಡ ಡ್ರಾ ಆಗಿತ್ತು. ಬೌಂಡರಿ ಆಧಾರದ ಮೇಲೆ ಇಂಗ್ಲೆಂಡ್  ತಂಡವನ್ನು ವಿಜೇತರೆಂದು ಘೋಷಿಸಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read